ಮೈಸೂರು | ಚಾಮುಂಡೇಶ್ವರಿ ದೇವಿಯ ಅದ್ಧೂರಿ ರಥೋತ್ಸವ
ಮೈಸೂರು: ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ಚಾಮುಂಡೇಶ್ವರಿಗೆ ಜಯವಾಗಲಿ... ಎಂಬ ಘೋಷಣೆ, ವಾದ್ಯಗೋಷ್ಠಿಗಳ ನಾದ, ಸಿಡಿಮದ್ದಿನ ಸದ್ದು, ಕಲಾ ತಂಡಗಳ ಪ್ರದರ್ಶನ ರಥೋತ್ಸವದ ರಂಗನ್ನು ಹೆಚ್ಚಿಸಿತು. ಸಾವಿರಾರು ಭಕ್ತರು ಒಕ್ಕೊರಲಿನಿಂದ ನಾಡದೇವತೆಗೆ ಜೈಕಾರ ಹೇಳಿ, ಬಾಳೆಹಣ್ಣು, ಜವನ ಎಸೆದು ಪ್ರಾರ್ಥಿಸಿದರು.