Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ
ವಿಜಯಪುರ: ಹೃದಯಾಘಾತದಿಂದ ನಿಧನರಾದ ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿಯಲ್ಲಿನ ರಂಗಾಶ್ರಯ ಸಭಾಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರಕ್ಕೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ನೂರಾರು ಅಭಿಮಾನಿಗಳು, ಸ್ನೇಹಿತರು, ಕುಟುಂಬ ವರ್ಗದವರು ಅಂತಿಮ ಗೌರವ ಸಲ್ಲಿಸಿದರು.