ನವದೆಹಲಿ: ವಿದೇಶ ಪ್ರವಾಸಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಿಂದ ಅನುಮತಿ ಸಿಗದ ಹಿನ್ನೆಲೆ ಅಫ್ಗಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
ಮುತ್ತಕಿ ಅವರ ಭಾರತ ಭೇಟಿಯನ್ನು ಈ ತಿಂಗಳು ನಿಗದಿಪಡಿಸಲಾಗಿತ್ತು. ಯೋಜನೆಯಂತೆ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದರೆ, ಅಫ್ಗಾನಿಸ್ಥಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗುತ್ತಿತ್ತು.