"ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ನನ್ನ ಆಪ್ತ ಸ್ನೇಹಿತ" ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ, ಪ್ರಧಾನಿ ಮೋದಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ನಾಯಕರ ಈ ಆಪ್ತ ಹೇಳಿಕೆಗಳು ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸುಧಾರಣೆಯತ್ತ ಬೊಟ್ಟು ಮಾಡಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, "ಪ್ರಧಾನಿ ಮೋದಿ ಅವರು ಭಾರತ ಮತ್ತು ಅಮೆರಿಕ ನಡುವಿನ ಮಹತ್ವದ ಪಾಲುದಾರಿಕೆಗೆ ಒತ್ತು ನೀಡಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ʻಫ್ರೆಂಡ್‌ಶಿಪ್ʼ ಸಂದೇಶಕ್ಕೆ ನರೇಂದ್ರ ಮೋದಿ ಪ್ರತಿಕ್ರಿಯೆ; ಏನಂದರು ಜೈಶಂಕರ್
Source : Smacy News
1 day ago