ಬೆಂಗಳೂರು (ಸೆ.8): ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ "ಕ್ವಾಂಟಮ್ ಸಿಟಿ (ಕ್ಯೂ-ಸಿಟಿ)" ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ
ಕ್ಯೂ-ಸಿಟಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿರಲಿದೆ. ಶೈಕ್ಷಣಿಕ ಸಂಸ್ಥೆಗಳು, ನಾವೀನ್ಯತೆ ಕೇಂದ್ರಗಳು, ಕ್ವಾಂಟಮ್ ಹಾರ್ಡ್‌ವೇರ್‌ಗಾಗಿ ಉತ್ಪಾದನಾ ಕ್ಲಸ್ಟರ್‌ಗಳು, ಪ್ರೊಸೆಸರ್‌ಗಳು ಮತ್ತು ಪರಿಕರಗಳನ್ನು ಸಂಯೋಜಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.