ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ (Congress) ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ (Veerendra Pappi) ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿರೇಂದ್ರ ಪಪ್ಪಿ ಅವರನ್ನು ಸೆ. 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಆದೇಶ ಹೊರಡಿಸಿದೆ.
ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ
Source : Smacy News
10 hours ago