T20 World Cup; ಆಸ್ಪತ್ರೆಗೆ ದಾಖಲಾದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ
ಟಿ20 ವಿಶ್ವಕಪ್‌ನ ಭಾರತದ ಎರಡನೇ ಪಂದ್ಯಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಲಭ್ಯರಾಗುವ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿ ಅವಧಿಯನ್ನು ತಪ್ಪಿಸಿಕೊಂಡ ಅಭಿಷೇಕ್ ಫೆಬ್ರವರಿ 12 ರಂದು ನವದೆಹಲಿಯಲ್ಲಿ ನಮೀಬಿಯಾ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಲಭ್ಯರಾಗುವ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ.
"ಹೊಟ್ಟೆಯ ಸೋಂಕಿನಿಂದಾಗಿ ಅಭಿಷೇಕ್ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮಸ್ಯೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ನಮೀಬಿಯಾ ವಿರುದ್ಧದ ಪಂದ್ಯವು ಸದ್ಯಕ್ಕೆ ಅನುಮಾನಾಸ್ಪದವಾಗಿದೆ" ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.