... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಲೀಗ್ ಹಂತದಲ್ಲಿ ಹೆಚ್ಚು ರನ್, ವಿಕೆಟ್ ಪಡೆದ ಆಟಗಾರರಿವರು..

T20 World Cup 2026: ಲೀಗ್ ಹಂತದಲ್ಲಿ ಹೆಚ್ಚು ರನ್, ವಿಕೆಟ್ ಪಡೆದ ಆಟಗಾರರಿವರು..

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ಜರುಗುತ್ತಿರುವ ಟಿ20 ವಿಶ್ವಕಪ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿದ್ದು, ಸೂಪರ್‌ –8 ಹಂತಕ್ಕೆ ಕ್ಷಣಗಣನೆ ಆರಂಭವಾಗಿದೆ. ಲೀಗ್‌ ಹಂತದಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್‌ –8 ಹಂತಕ್ಕೆ ಲಗ್ಗೆಯಿಟ್ಟಿದ್ದು, ಈ ಹಂತವನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ತಂಡವು 'ಎ' ಗುಂಪಿನಲ್ಲಿ ಕಾಣಿಸಿಕೊಂಡಿದೆ. ಇದೇ ಗುಂಪಿನಲ್ಲಿ ಕಳೆದ ಬಾರಿಯ ರನ್ನರ್-ಅಪ್ ಆದ ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿವೆ. '

ಬಿ' ಗುಂಪಿನಲ್ಲಿ ಜಂಟಿ ಆತಿಥ್ಯ ವಹಿಸುತ್ತಿರುವ ಶ್ರೀಲಂಕಾ ಜೊತೆಗೆ ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ತೇರ್ಗಡೆ ಹೊಂದಿವೆ. ಲೀಗ್ ಹಂತದಲ್ಲಿ ಪ್ರತಿಯೊಂದು ತಂಡವೂ ತಲಾ 4 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅತಿಹೆಚ್ಚು ರನ್‌ ಗಳಿಸಿರುವ ಬ್ಯಾಟರ್‌ ಹಾಗೂ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ ಇಲ್ಲಿದೆ. ಹೆಚ್ಚು ರನ್‌ ಗಳಿಸಿದ ಬ್ಯಾಟರ್: ‌ ಲೀಗ್ ಹಂತದ ಪಂದ್ಯದಲ್ಲಿ ಅತಿಹೆಚ್ಚು ರನ್‌ ಗಳಿಸಿರುವ ಬ್ಯಾಟರ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾನ್ ಅಗ್ರಸ್ಥಾನದಲ್ಲಿದ್ದು, 4 ಪಂದ್ಯಗಳಲ್ಲಿ 164.18 ಸ್ಟ್ರೈಕ್‌ರೇಟ್‌ನಲ್ಲಿ 220 ರನ್‌ ಗಳಿಸಿದ್ದಾರೆ. 2ನೇ ಸ್ಥಾನದಲ್ಲಿರುವ ಪಥುಮ್ ನಿಸಾಂಕ ಅವರು ಒಂದು ಶತಕ ಸೇರಿದಂತೆ 199 ರನ್‌ ಬಾರಿಸಿದ್ದಾರೆ. ಭಾರತದ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಅವರು 4 ಪಂದ್ಯಗಳಲ್ಲಿ 202.30 ಸ್ಟ್ರೈಕ್‌ರೇಟ್‌ನಲ್ಲಿ 176 ರನ್‌ ಗಳಿಸಿದ್ದು, ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

 ಕೆನಡಾದ ಯುವರಾಜ್ ಸಾಮ್ರಾ ಅವರು 110 ರನ್‌ ಗಳಿಸಿರುವುದು ಈ ಟೂರ್ನಿಯಲ್ಲಿ ಇನಿಂಗ್ಸ್ ಒಂದರಲ್ಲಿ ಬ್ಯಾಟರ್‌ ಒಬ್ಬರು ಗಳಿಸಿರುವ ಗರಿಷ್ಠ ರನ್ ಆಗಿದೆ. ಹೆಚ್ಚು ವಿಕೆಟ್ ಪಡೆದ ಬೌಲರ್‌: ಈ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಅಮೆರಿಕದ ಶ್ಯಾಡ್ಲಿ ವ್ಯಾನ್ ಶಾಲ್ಕ್‌ವಿಕ್ ಅವರು 4 ಪಂದ್ಯಗಳಲ್ಲಿ 13 ವಿಕೆಟ್‌ ಪಡೆಯುವ ಮೂಲಕ ಯಶಸ್ವಿ ಬೌಲರ್ ಆಗಿದ್ದಾರೆ. ಭಾರತದ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ, 4 ಪಂದ್ಯಗಳಲ್ಲಿ 9 ವಿಕೆಟ್ ಕಬಳಿಸುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ. ವಿವಾದಾತ್ಮಕ ಬೌಲಿಂಗ್ ಶೈಲಿಯಿಂದ ಸುದ್ದಿಯಲ್ಲಿರುವ ಪಾಕ್ ಬೌಲರ್ ಉಸ್ಮಾನ್ ತಾರೀಕ್, 3 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ವೆಸ್ಟ್‌ ಇಂಡೀಸ್‌ನ ರೊಮಾರಿಯೋ ಶೆಫರ್ಡ್, ಸ್ಕಾಟ್ಲೆಂಡ್ ವಿರುದ್ಧ ಹಾಗೂ ಯುಎಇ ತಂಡದ ಬೌಲರ್ ಜುನೈದ್ ಸಿದ್ದಿಕ್ ಅವರು ಕೆನಡಾ ವಿರುದ್ಧ 5 ವಿಕೆಟ್ ಗೊಂಚಲು ಪಡೆದಿದ್ದಾರೆ. ಇಂದಿನಿಂದ ಸೂಪರ್‌ –8 ಪಂದ್ಯಗಳು ಆರಂಭವಾಗಲಿವೆ. ಮಾರ್ಚ್‌ 8ರಂದು ಫೈನಲ್‌ ಪಂದ್ಯ ಜರುಗಲಿದೆ.

Source : Prajavani

1 day ago

Home Flash News