... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಇಂಡಿಯಾ-ಕಿವೀಸ್ ಫೈನಲ್ ಪಂದ್ಯಕ್ಕೆ ಅಂಪೈರ್‌ಗಳು ಯಾರು? ಐಸಿಸಿ ಲಿಸ್ಟ್ ಇಲ್ಲಿದೆ!

T20 World Cup Final: ಇಂಡಿಯಾ-ಕಿವೀಸ್ ಫೈನಲ್ ಪಂದ್ಯಕ್ಕೆ ಅಂಪೈರ್‌ಗಳು ಯಾರು? ಐಸಿಸಿ ಲಿಸ್ಟ್ ಇಲ್ಲಿದೆ!

ಭಾನುವಾರ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಅಂಪೈರ್‌ಗಳ ಪಟ್ಟಿಯನ್ನು ಪ್ರಕಟಿಸಿದೆ. ಫೈನಲ್ ಪಂದ್ಯದ ಮುನ್ನ ರಿಕ್ಕಿ ಮಾರ್ಟಿನ್ ಅವರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ (IND vs NZ T20 World Cup Final) ನಡುವಿನ ಹೈವೋಲ್ಟೇಜ್ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ವದ ಪಂದ್ಯವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ತೆರೆ ಎಳೆದಿದೆ. ಐಸಿಸಿ ಪ್ರಕಟಿಸಿರುವ ಪಟ್ಟಿ ಪ್ರಕಾರ, ಇಂಗ್ಲೆಂಡ್‌ನ ರಿಚರ್ಡ್ ಇಲಿಂಗ್‌ವರ್ತ್ (Richard Illingworth) ಮತ್ತು ಅಲೆಕ್ಸ್ ವಾರ್ಫ್ (Alex Wharf) ಫೀಲ್ಡ್ ಅಂಪೈರ್‌ಗಳಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಇಲಿಂಗ್‌ವರ್ತ್ ಅವರಿಗೆ ಇದು ಸತತ ಎರಡನೇ ಟಿ20 ವಿಶ್ವಕಪ್ ಫೈನಲ್ ಆಗಿದೆ. ಕಳೆದ ಬಾರಿ ಬಾರ್ಬಡೋಸ್‌ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯದಲ್ಲೂ ಅವರೇ ಅಂಪೈರ್ ಆಗಿದ್ದರು. ಅಷ್ಟೇ ಅಲ್ಲ, 2023ರ ಏಕದಿನ ವಿಶ್ವಕಪ್ ಫೈನಲ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲೂ ಇಲಿಂಗ್‌ವರ್ತ್ ಅಂಪೈರಿಂಗ್ ಮಾಡಿದ್ದರು. ಮತ್ತೊಬ್ಬ ಅಂಪೈರ್ ಅಲೆಕ್ಸ್ ವಾರ್ಫ್ ಅವರಿಗೆ ಇದು ಮೊದಲ ವಿಶ್ವಕಪ್ ಫೈನಲ್ ಅನುಭವ. ವಾರ್ಫ್ ಈ ಹಿಂದೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಪರ ಆಟಗಾರನಾಗಿಯೂ ಆಡಿದ್ದರು.
ಅಲೆಕ್ಸ್ ವಾರ್ಫ್ ಅವರು 2022ರ ಮಹಿಳಾ ಏಕದಿನ ವಿಶ್ವಕಪ್ ಮತ್ತು 2023ರ ಪುರುಷರ ಏಕದಿನ ವಿಶ್ವಕಪ್‌ನಲ್ಲೂ ಪಂದ್ಯಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ವಿಶೇಷ ಅಂದ್ರೆ, ಈಡನ್ ಗಾರ್ಡನ್ಸ್‌ನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಸೆಮಿಫೈನಲ್ ಪಂದ್ಯವನ್ನು ಇವರಿಬ್ಬರೇ ನಿರ್ವಹಿಸಿದ್ದರು. ಇನ್ನು, ದಕ್ಷಿಣ ಆಫ್ರಿಕಾದ ಅಲ್ಲಾವುದ್ದೀನ್ ಪಾಲೆಕರ್ ಮೂರನೇ ಅಂಪೈರ್ ಆಗಿ ಮತ್ತು ಆಡ್ರಿಯನ್ ಹೋಲ್ಡ್‌ಸ್ಟಾಕ್ ನಾಲ್ಕನೇ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆಂಡಿ ಪೈಕ್ರಾಫ್ಟ್ ಅವರು ಮ್ಯಾಚ್ ರೆಫರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ.

Source : Asianet News

1 hour ago

Home Flash News