Draupadi Murmu: ಮಮತಾ ಬ್ಯಾನರ್ಜಿ ವಿರುದ್ಧ ದ್ರೌಪದಿ ಮುರ್ಮು ಕೆಂಡ! ಗರಂ ಆಗಿದ್ದೇಕೆ ರಾಷ್ಟ್ರಪತಿಗಳು?
Draupadi Murmu: ಪಶ್ಚಿಮ ಬಂಗಾಳದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಶನಿವಾರದಂದು ಶೀಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ: ಡಾರ್ಜಿಲಿಂಗ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ (West Bengal) ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಶನಿವಾರದಂದು ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಪತಿ (President) ದ್ರೌಪದಿ ಮುರ್ಮು (Draupadi Murmu) ಅವರು, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಆ ಕುರಿತ ವರದಿ ಇಲ್ಲಿದೆ: ಉತ್ತರ ಬಂಗಾಳದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿದ್ದ ಅಂತರರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ್ದಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ, ಕಾರ್ಯಕ್ರಮಕ್ಕೆ ಅನುಮತಿ ನೀಡುವಲ್ಲಿನ ವಿಳಂಬ, ಸ್ಥಳ ಬದಲಾವಣೆ ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಬಗ್ಗೆ ಪ್ರಸ್ತಾಪಿಸಿದ ರಾಷ್ಟ್ರಪತಿಗಳು, "ಮಮತಾ ದೀದಿ ನೀವೂ ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ?" ಎಂದು ಪ್ರಶ್ನಿಸುವ ಮೂಲಕ ಮಮತಾ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ.