... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಉರಿ ವಲಯದಲ್ಲಿ ನುಸುಳುವಿಕೆ ಯತ್ನ ವಿಫಲ: ಓರ್ವ ಉಗ್ರನ ಹತ್ಯೆ

Jammu-Kashmir: ಉರಿ ವಲಯದಲ್ಲಿ ನುಸುಳುವಿಕೆ ಯತ್ನ ವಿಫಲ: ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದ ಗಡಿ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ವಿಫಲಗೊಳಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಉರಿ ವಲಯದ ಬುಚ್ಚರ್ ಎಂಬ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಕಾರ್ಯಾಚರಣೆ ಆರಂಭವಾಯಿತು. ನುಸುಳುವಿಕೆ ಬಗ್ಗೆ ಪೊಲೀಸರು ನೀಡಿದ ಖಚಿತ ಮಾಹಿತಿಯ ಮೇರೆಗೆ ಸೇನೆಯು ಹೊಂಚು ಹಾಕಿ ಕುಳಿತಿತ್ತು. ದಟ್ಟವಾದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಕಂಡ ಸೈನಿಕರು ಎಚ್ಚರಿಕೆ ನೀಡಿದರು. 

ಈ ವೇಳೆ ಉಗ್ರನು ಸೈನಿಕರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದಾಗ, ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು. ಶಸ್ತ್ರಾಸ್ತ್ರ ವಶ: ಹತ್ಯೆಯಾದ ಉಗ್ರನ ಬಳಿಯಿಂದ ಎಕೆ ರೈಫಲ್, ಪಿಸ್ತೂಲ್‌ಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆ ಇರುವುದರಿಂದ ಸೇನೆಯು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಮುಂದುವರಿಸಿದೆ. ಗಡಿಯಲ್ಲಿ ಹಿಮ ಕರಗುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನವು ಉಗ್ರರನ್ನು ಭಾರತದೊಳಗೆ ನುಗ್ಗಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದು, ಭಾರತೀಯ ಸೇನೆಯು ಹದ್ದಿನ ಕಣ್ಣಿಟ್ಟಿದೆ.

Source : Udayavani

1 hour ago

Home Flash News