... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
294 ಸ್ಥಾನಗಳ ಪೈಕಿ 266ರಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುತ್ತೇವೆ: ಮಮತಾ

294 ಸ್ಥಾನಗಳ ಪೈಕಿ 266ರಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುತ್ತೇವೆ: ಮಮತಾ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಟಿಎಂಸಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯೂ ಬಹುಮತ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರವಸೆ ವ್ಯಕ್ತಪಡಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು 294 ಸ್ಥಾನಗಳ ಪೈಕಿ 291ರಲ್ಲಿ ಟಿಎಂಸಿ ಸ್ಪರ್ಧಿಸಲಿದ್ದು, ಇನ್ನುಳಿದ 3 ಸ್ಥಾನಗಳಲ್ಲಿ ಮಿತ್ರ ಪಕ್ಷ ಭಾರತೀಯ ಗೂರ್ಖಾ ಪ್ರಜಾತಂತ್ರಿಕ್ ಮೋರ್ಚಾ (ಬಿಜಿಪಿಎಂ) ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಾವು (ಟಿಎಂಸಿ) 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಬಾರಿಯೂ ಬಿಜೆಪಿಗೆ ಮುಖಭಂಗ ತಪ್ಪಿದ್ದಲ್ಲ, ಜನವಿರೋಧಿ ನೀತಿಗಳಿಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಎಂದು ಬ್ಯಾನರ್ಜಿ ಹೇಳಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಸಿಗದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಂಘಟನೆಯಲ್ಲಿ ಅವಕಾಶ ನೀಡಲಾಗುವುದು ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್‌ 23 ಮತ್ತು 29ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.

Source : Prajavani

1 hour ago

Home Flash News