... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಸಚಿವ ಪುರಿ ಪುತ್ರಿಗೂ ಎಪ್‌ಸ್ಟೀನ್‌ಗೂ ಸಂಬಂಧ ಕಲ್ಪಿಸುವ ಪೋಸ್ಟ್ ಡಿಲೀಟ್ ಮಾಡಿ:

ಸಚಿವ ಪುರಿ ಪುತ್ರಿಗೂ ಎಪ್‌ಸ್ಟೀನ್‌ಗೂ ಸಂಬಂಧ ಕಲ್ಪಿಸುವ ಪೋಸ್ಟ್ ಡಿಲೀಟ್ ಮಾಡಿ: HC

ನವದೆಹಲಿ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಅವರ ಪುತ್ರಿ ಹಿಮಯಾನಿ ಪುರಿ ಅವರಿಗೆ ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಜತೆ ಸಂಪರ್ಕವಿದೆ ಎಂದು ಬಿಂಬಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ 24 ಗಂಟೆಗಳ ಒಳಗಾಗಿ ತೆರವುಗೊಳಿಸುವಂತೆ ದೆಹಲಿ ಹೈಕೋರ್ಟ್‌ ಆದೇಶಿಸಿದೆ. ಹಿಮಯಾನಿ ಪುರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್‌ಗಳನ್ನು ತೆಗೆದುಹಾಕಬೇಕು. ಒಂದು ವೇಳೆ ಬಳಕೆದಾರರು ಪೋಸ್ಟ್‌ಗಳನ್ನು ತೆಗೆದು ಹಾಕದಿದ್ದರೆ ಸಂಬಂಧಪಟ್ಟ ಸಂಸ್ಥೆಗಳು (ಮೆಟಾ, ಎಕ್ಸ್ ಇತ್ಯಾದಿ) ಅಂತಹ ವಿಷಯವನ್ನು ತೆಗೆದುಹಾಕಬಹುದು ಅಥವಾ ಪ್ರವೇಶವನ್ನು ನಿರ್ಬಂಧಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಹಿಮಯಾನಿ ಪುರಿ ಅವರು ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 

ಹಿಮಯಾನಿ ಪುರಿ ಪರ ವಾದ ಮಂಡಿಸಿದ ಮಹೇಶ್ ಜೇಠ್ಮಲಾನಿ, ಇದು ರಾಜಕೀಯ ದ್ವೇಷದಿಂದ ಕೂಡಿದ ವ್ಯವಸ್ಥಿತ ದಾಳಿಯಾಗಿದೆ. ಕೇಂದ್ರ ಸಚಿವರ ಮಗಳು ಎಂಬ ಕಾರಣಕ್ಕಾಗಿಯೇ ಅವರನ್ನು ಗುರಿ ಮಾಡಲಾಗುತ್ತಿದೆ ಎಂದಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ಗೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಇಂತಹ ಯಾವುದೇ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳದಂತೆ ಬಳಕೆದಾರರಿಗೆ ನಿರ್ಬಂಧ ಹೇರಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. '2026 ಫೆಬ್ರವರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಿಮಯಾನಿ ಪುರಿ ಅವರಿಗೆ ಜೆಫ್ರಿ ಎಪ್‌ಸ್ಟೀನ್‌ ಪ್ರಕರಣದೊಂದಿಗೆ ಸಂಬಂಧವಿದೆ ಎಂಬ ಪೋಸ್ಟ್‌ಗಳು ಹರಿದಾಡುತ್ತಿದ್ದವು. ಇವುಗಳು ಕೇವಲ ಕಟ್ಟುಕಥೆಯಾಗಿದ್ದು, ಯಾವುದೇ ಆಧಾರವಿಲ್ಲ' ಎಂದು ಅರ್ಜಿದಾರರು ವಾದಿಸಿದ್ದಾರೆ.

Source : Prajavani

1 hour ago

Home Flash News