... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ದಾವಣಗೆರೆಯಲ್ಲಿ ಕೊನೆಕ್ಷಣ ಏನಾದರೂ ಆಗಬಹುದು:

ದಾವಣಗೆರೆಯಲ್ಲಿ ಕೊನೆಕ್ಷಣ ಏನಾದರೂ ಆಗಬಹುದು: ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಬಾಗಲಕೋಟೆ, ದಾವಣಗೆರೆ ಈ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ, ಹಿಂದೂ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ದಾವಣಗೆರೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯಾದರು ಅಚ್ಚರಿಯಿಲ್ಲ ಬಿಜೆಪಿಯವರು ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ನಾನು ಅಭ್ಯರ್ಥಿ ಹಾಕುವ ಬಗ್ಗೆ ಕಾದು ನೋಡುತ್ತೇನೆ. ವಿಜಯೇಂದ್ರ ಎಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದಾನೆ ಅನ್ನೋದನ್ನ ಚೆಕ್ ಮಾಡ್ತೇವೆ. 

ದಾವಣಗೆರೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯಾದರು ಅಚ್ಚರಿಯಿಲ್ಲ, ಏಕೆಂದರೆ ಶಾಮನೂರು ಕುಟುಂಬದ ಜೊತೆಗೆ ವಿಜಯೆಂದ್ರಗೆ ಹೊಂದಾಣಿಕೆ ಇದೆ. ದಾವಣಗೆರೆಯಲ್ಲಿ ಬಿಜೆಪಿ ಪರ ವಿಜಯೇಂದ್ರ ಕೆಲಸ ಮಾಡ್ತಾರೋ ಇಲ್ಲೋ ಗೊತ್ತಿಲ್ಲ. ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ ಯಡಿಯೂರಪ್ಪ ಹಾಗೂ ಶಾಮನೂರು ಕುಟುಂಬಗಳು ಬಹಿರಂಗವಾಗಿಯೇ ಹೊಂದಾಣಿಕೆಯಿಂದ ಇದೆ. ಬಿಜೆಪಿ ಪರ ಅಪ್ಪ ಮಗ ಕೆಲಸ ಮಾಡುವ ಬಗ್ಗೆ ನನಗೆ ಅನುಮಾನವಿದೆ. ಹೊಂದಾಣಿಕೆ ಮಾಡಿಕೊಂಡು ಇವರು ಕೊನೆ ಕ್ಷಣದಲ್ಲಿ ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿಯ ಹಿರಿಯ ಮುಖಂಡ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Source : Asianet News

2 hours ago

Home Flash News