... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಸರ್ಕಾರ ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುತ್ತಿದೆ:

ಸರ್ಕಾರ ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುತ್ತಿದೆ: ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪ

ಮೈಸೂರು (ಮಾ.19): ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ, ಈಗ ಭ್ರಷ್ಟಾಚಾರದಲ್ಲೇ ಮುಳುಗಿದ್ದು ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುವ ದರಿದ್ರ ಸ್ಥಿತಿಗೆ ತಲುಪಿದೆ ಎಂದು ಮಾಜಿ ಸಚಿವ, ಜೆಡಿಎಸ್‌ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ ನೀಡಿತ್ತು. ಆದರೆ, ಸರ್ಕಾರ ಈಗ ಮಾಡುತ್ತಿರುವು ದಾದರೂ ಏನು? ದೇವಸ್ಥಾನದಲ್ಲೂ ಲಂಚ ಪಡೆಯುತ್ತಿದೆ.
ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ನಡೆದ ಧನುರ್ಮಾಸದ ಜಾತ್ರಾ ಮಹೋತ್ಸವದಲ್ಲಿ ಕೇವಲ ಪೇಂಟಿಂಗ್ ಕೆಲಸಕ್ಕೆ ಜಿ.ಎಸ್‌.ಟಿ ಹೊರತುಪಡಿಸಿ 5,27,639 ರು. ಬಿಲ್ ಮಾಡಲಾಗಿದೆ. ಈ ಹಿಂದೆ ಇದೇ ಕೆಲಸಕ್ಕೆ ಗರಿಷ್ಠ ಎಂದರೆ ಕೇವಲ 1 ಲಕ್ಷ ರು. ವೆಚ್ಚವಾಗುತ್ತಿತ್ತು ಎಂದರು. ಇನ್ನು ಲೈಟಿಂಗ್, ಸೌಂಡ್ ಸಿಸ್ಟಮ್ ಮತ್ತು ಬ್ಯಾರಿಕೇಡ್ ವ್ಯವಸ್ಥೆಗೆ 14.74 ಲಕ್ಷ ರು. ಬಿಲ್ ಮಾಡಿದ್ದಾರೆ. ನಿರ್ಮಿತಿ ಕೇಂದ್ರದಿಂದ ಈ ಜಾತ್ರೆಗಾಗಿ 32 ಲಕ್ಷ ರು. ತೆಗೆದುಕೊಳ್ಳಲಾಗಿದೆ. ರೈತರು ಜಾನುವಾರುಗಳನ್ನು ಕಟ್ಟುತ್ತಾರೆ. ವ್ಯಾಪಾರಿಗಳು ಅಂಗಡಿಗಳನ್ನು ಹಾಕುತ್ತಾರೆ. 

ಅಂದ ಮೇಲೆ 32 ಲಕ್ಷ ರೂ. ಖರ್ಚು ಮಾಡಿದ್ದಾದರೂ ಏಕೆ ಎಂದು ಪ್ರಶ್ನಿಸಿದರು. 2019ರಲ್ಲಿ ಈ ಜಾತ್ರೆಗೆ 4.47 ಲಕ್ಷ ರು. 2020-21 ರಲ್ಲಿ ಕೋವಿಡ್‌ ಸಮಯವಾದ್ದರಿಂದ ಕೇವಲ 21 ಸಾವಿರ ರು. ವೆಚ್ಚ ಮಾಡಲಾಗಿತ್ತು. ನಾನು ಶಾಸಕನಾಗಿದ್ದಾಗ 2022- 23ರಲ್ಲಿ 3,74600 ರು. ಖರ್ಚು ಮಾಡಲಾಗಿತ್ತು. ಈ ಬಾರಿ 32 ಲಕ್ಷ ಎಂದರೆ ಸರ್ಕಾರ ಎಷ್ಟು ಪರ್ಸೆಂಟ್ ಭ್ರಷ್ಟಾಚಾರ ಮಾಡುತ್ತಿದೆ ಎಂದು ಜನರೇ ತೀರ್ಮಾನಿಸಬೇಕು. ಅಲ್ಲದೇ, ದೇವಸ್ಥಾನದ ಅಭಿವೃದ್ಧಿಗೆ ಬಳಸಬೇಕಿದ್ದ ಸುಮಾರು 80 ಲಕ್ಷ ರು. ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

Source : Asianet News

1 hour ago

Home Flash News