... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ನಾಮಪತ್ರ ಸಲ್ಲಿಕೆಗೆ 1 ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಪ್ರಭಾವಿ ನಾಯಕಿ

ನಾಮಪತ್ರ ಸಲ್ಲಿಕೆಗೆ 1 ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಪ್ರಭಾವಿ ನಾಯಕಿ

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೇವಲ ಒಂದು ದಿನ ಬಾಕಿ ಇರುವಂತೆ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಬಿಜೆಪಿಯ ಪ್ರಭಾವಿ ನಾಯಕಿ ಹಾಗೂ ಮಾಜಿ ಸಚಿವೆ ನಂದಿತಾ ಗರ್ಲೋಸಾ ಅವರು ಕೇಸರಿ ಪಡೆಗೆ ಕೈಕೊಟ್ಟು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯಿಂದಾಗಿ ಹಾಫ್ಲಾಂಗ್ (ST) ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ದಿಮಾ ಹಸಾವೊ ಜಿಲ್ಲೆಯ ಜನಪ್ರಿಯ ನಾಯಕಿಯಾಗಿರುವ ನಂದಿತಾ ಗರ್ಲೋಸಾ ಅವರು ಹಾಫ್ಲಾಂಗ್ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದರು. ಆದರೆ, ಆಡಳಿತ ವಿರೋಧಿ ಅಲೆಯನ್ನು ತಡೆಯಲು ಬಿಜೆಪಿ ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಿ, ಅವರ ಬದಲಿಗೆ ರೂಪಾಲಿ ಲಾಂಗ್ಥಾಸಾ ಅವರಿಗೆ ಮಣೆ ಹಾಕಿತ್ತು. 

ಇದರಿಂದ ಅಸಮಾಧಾನಗೊಂಡ ಗರ್ಲೋಸಾ ಭಾನುವಾರ ತಡರಾತ್ರಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದರು. ಕಾಂಗ್ರೆಸ್ ಈಗಾಗಲೇ ಈ ಕ್ಷೇತ್ರಕ್ಕೆ ನಿರ್ಮಲ್ ಲಾಂಗ್ಥಾಸಾ ಅವರ ಹೆಸರನ್ನು ಘೋಷಿಸಿತ್ತು. ಆದರೆ, ಗರ್ಲೋಸಾ ಅವರ ಆಗಮನದ ನಂತರ ಪಕ್ಷವು ತನ್ನ ನಿರ್ಧಾರವನ್ನು ಮರುಪರಿಶೀಲಿಸುತ್ತಿದೆ ಎನ್ನಲಾಗಿದೆ. ಭಾನುವಾರವಷ್ಟೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಾಫ್ಲಾಂಗ್‌ಗೆ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಸಿಎಂ ಭೇಟಿಯ ಬೆನ್ನಲ್ಲೇ ಕಾಂಗ್ರೆಸ್ ಈ 'ಮಹಾನ್ ನಡೆಯನ್ನು' ಪ್ರದರ್ಶಿಸಿರುವುದು ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ನಂದಿತಾ ಅವರು ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಹಾಗೂ ಬುಡಕಟ್ಟು ನಂಬಿಕೆಗಳಂತಹ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಈಗ ಎಲ್ಲರ ಕಣ್ಣು ಕಾಂಗ್ರೆಸ್‌ನ ಅಂತಿಮ ಪಟ್ಟಿಯ ಮೇಲಿದ್ದು, ಹಾಫ್ಲಾಂಗ್ ಅಭ್ಯರ್ಥಿಯಾಗಿ ಗರ್ಲೋಸಾ ಕಣಕ್ಕಿಳಿಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Source : Udayavani

1 hour ago

Home Flash News