... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಹೊರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಸುಂಕ ವಿಧಿಸಲು ಮುಂದಾದ ಇರಾನ್

ಹೊರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಸುಂಕ ವಿಧಿಸಲು ಮುಂದಾದ ಇರಾನ್

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ಇರಾನ್ ಈಗ ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ 'ಹೊರ್ಮುಜ್ ಜಲಸಂಧಿ'ಯನ್ನು ತನ್ನ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ. ಈ ಜಲಸಂಧಿಯ ಮೂಲಕ ಹಾದುಹೋಗುವ ಆಯ್ದ ಹಡಗುಗಳಿಗೆ ಬರೋಬ್ಬರಿ 2 ಮಿಲಿಯನ್ ಡಾಲರ್ (ಸುಮಾರು 18.8 ಕೋಟಿ ರೂಪಾಯಿ) ಸಾರಿಗೆ ಶುಲ್ಕವನ್ನು ವಿಧಿಸಲು ಇರಾನ್ ನಿರ್ಧರಿಸಿದೆ ಎನ್ನಲಾಗಿದೆ. ಇರಾನ್‌ನ ಸಂಸದೀಯ ರಾಷ್ಟ್ರೀಯ ಭದ್ರತಾ ಸಮಿತಿಯ ಸದಸ್ಯ ಅಲಾದ್ದೀನ್ ಬೊರೌಜೆರ್ಡಿ ಈ ವಿಷಯವನ್ನು ಖಚಿತಪಡಿಸಿದ್ದಾರೆ. 

"ಯುದ್ಧಕ್ಕೆ ತನ್ನದೇ ಆದ ವೆಚ್ಚವಿರುತ್ತದೆ. ಹೀಗಾಗಿ ಹೊರ್ಮುಜ್ ಜಲಸಂಧಿಯನ್ನು ಬಳಸುವ ಹಡಗುಗಳಿಂದ ಶುಲ್ಕ ವಸೂಲಿ ಮಾಡುವುದು ಅನಿವಾರ್ಯ. ಇದು ಇರಾನ್‌ನ ಸಾರ್ವಭೌಮ ಅಧಿಕಾರ ಮತ್ತು ಶಕ್ತಿಯನ್ನು ಜಗತ್ತಿಗೆ ತೋರಿಸುತ್ತದೆ," ಎಂದು ಅವರು ಇರಾನ್ ಇಂಟರ್ನ್ಯಾಷನಲ್ ವರದಿಯಲ್ಲಿ ತಿಳಿಸಿದ್ದಾರೆ. ಆದರೆ, ಅಂತರಾಷ್ಟ್ರೀಯ ನಿರ್ಬಂಧಗಳನ್ನು ಎದುರಿಸುತ್ತಿರುವ ಇರಾನ್‌ಗೆ ಈ ರೀತಿಯ ಹಣ ಪಾವತಿಸುವುದು ಜಾಗತಿಕ ಹಡಗು ಕಂಪನಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ ವಾರವಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, "ಮುಂದಿನ 48 ಗಂಟೆಗಳ ಒಳಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸದಿದ್ದರೆ ಇರಾನ್‌ನ ಅತಿದೊಡ್ಡ ವಿದ್ಯುತ್ ಸ್ಥಾವರಗಳನ್ನು ಧ್ವಂಸಗೊಳಿಸುವುದಾಗಿ" ಎಚ್ಚರಿಕೆ ನೀಡಿದ್ದರು.

 ಇದಕ್ಕೆ ಪ್ರತಿಯಾಗಿ ಇರಾನ್, "ಒಂದು ವೇಳೆ ಅಮೆರಿಕ ದಾಳಿ ಮಾಡಿದರೆ, ಒಂದೇ ದಿನದಲ್ಲಿ ಇಸ್ರೇಲ್‌ನ ಸಂಪೂರ್ಣ ಇಂಧನ ಮೂಲಸೌಕರ್ಯವನ್ನು ನಾಶಪಡಿಸುತ್ತೇವೆ" ಎಂದು ಗುಡುಗಿದ್ದಾರೆ. ಜಾಗತಿಕ ತೈಲ ಮಾರುಕಟ್ಟೆಗೆ ಬಿಸಿ ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸರಬರಾಜಿನ ಪೈಕಿ ಶೇ. 20 ರಷ್ಟು ಭಾಗ ಈ ಹೊರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತದೆ. ಮಾರ್ಚ್ ಮೊದಲ ವಾರದಿಂದ ಈ ಮಾರ್ಗವು ಬಹುತೇಕ ಬಂದ್ ಆಗಿರುವುದರಿಂದ, ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಗಗನಕ್ಕೇರಿವೆ.

Source : Udayavani

2 days ago

Home Flash News