... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಎನ್‌ಡಿಎ ಸೀಟು ಹಂಚಿಕೆ; ಎಐಎಡಿಎಂಕೆಗೆ 178,ಬಿಜೆಪಿಗೆ 27 ಸ್ಥಾನ!

Tamil Nadu Polls: ಎನ್‌ಡಿಎ ಸೀಟು ಹಂಚಿಕೆ; ಎಐಎಡಿಎಂಕೆಗೆ 178,ಬಿಜೆಪಿಗೆ 27 ಸ್ಥಾನ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟವು ತನ್ನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಒಟ್ಟು 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ (AIADMK) 178 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದರೆ, ಬಿಜೆಪಿ(BJP) 27 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಮೂಲಗಳ ಪ್ರಕಾರ, ಮೈತ್ರಿಕೂಟದ ಇತರ ಮಿತ್ರಪಕ್ಷಗಳಿಗೂ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದ್ದು, ಎಐಎಡಿಎಂಕೆ: 178, ಬಿಜೆಪಿ: 27,ಪಿಎಂಕೆ (PMK): 18,ಎಎಂಎಂಕೆ (AMMK): 11ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಸೀಟು ಹಂಚಿಕೆಯ ಮಾತುಕತೆಗಳು ಅತ್ಯಂತ ಸುಗಮವಾಗಿ ನಡೆದಿದ್ದು, ಅಂತಿಮ ಸಂಖ್ಯೆಗಳನ್ನು ಅಧಿಕೃತಗೊಳಿಸಲಾಗಿದೆ ಎಂದು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.

 "ಎನ್‌ಡಿಎ ಒಂದು 'ವಿಜಯದ ಮೈತ್ರಿಕೂಟ'ವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಎಐಎಡಿಎಂಕೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವುದು ಖಚಿತ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ಮೇಲೆ ವಾಗ್ದಾಳಿ ತಮ್ಮ ದೆಹಲಿ ಭೇಟಿಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದ ಪಳನಿಸ್ವಾಮಿ, "ನಮ್ಮ ದೆಹಲಿ ಭೇಟಿಯನ್ನು ಕಂಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಯಭೀತರಾಗಿದ್ದಾರೆ. ಮೈತ್ರಿ ಪಕ್ಷಗಳ ನಾಯಕರು ಪರಸ್ಪರ ಭೇಟಿಯಾಗುವುದು ಸಹಜ ಪ್ರಕ್ರಿಯೆ. ಕನಿಮೊಳಿ ಅವರು ದೆಹಲಿಗೆ ಹೋಗಿ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ ಇವರು ಯಾಕೆ ಪ್ರಶ್ನಿಸುವುದಿಲ್ಲ?" ಎಂದು ಕಿಡಿಕಾರಿದ್ದಾರೆ. ಮೈತ್ರಿ ಸರ್ಕಾರ ರಚನೆಯ ಸಾಧ್ಯತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

Source : Udayavani

1 hour ago

Home Flash News