ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಸಾಹಿಬ್ಝಾದ ಫರ್ಹಾನ್
PSL 2026: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಸಾಹಿಬ್ಝಾದ ಫರ್ಹಾನ್ (Sahibzada Farhan) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸಾಹಿಬ್ಝಾದ, ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.
ಲಾಹೋರ್ನಲ್ಲಿ ನಡೆದ ಪಿಎಸ್ಎಲ್ನ 8ನೇ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ಹಾಗೂ ಹೈದರಾಬಾದ್ ಕಿಂಗ್ಸ್ಮೆನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್ಮೆನ್ ತಂಡವು 20 ಓವರ್ಗಳಲ್ಲಿ 225 ರನ್ ಕಲೆಹಾಕಿದ್ದರು.
ಈ ಗುರಿ ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್ಝಾದ ಫರ್ಹಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ 57 ಎಸೆತಗಳನ್ನು ಎದುರಿಸಿದ ಸಾಹಿಬ್ಝಾದ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 106 ರನ್ ಬಾರಿಸಿದರು.
ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸಾಹಿಬ್ಝಾದ ಫರ್ಹಾನ್ 4ನೇ ಸ್ಥಾನಕ್ಕೇರಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ. ಅಂದರೆ ಟಿ20 ಕ್ರಿಕೆಟ್ನಲ್ಲಿ ಕಿಂಗ್ ಕೊಹ್ಲಿ ಒಟ್ಟು 9 ಸೆಂಚುರಿ ಸಿಡಿಸಿದ್ದಾರೆ.