... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೈ ಎಲೆಕ್ಷನ್​​:

ಬೈ ಎಲೆಕ್ಷನ್​​: ಅಬ್ಬರದ ಕ್ಯಾಂಪೇನ್​​ ಮಧ್ಯೆ ಜಮೀರ್​​ಗೆ ಸಿಎಂ ತುರ್ತು ಬುಲಾವ್; ನಾಳೆ ಅಖಾಡಕ್ಕೆ ಸಚಿವ ಎಂಟ್ರಿ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಪ್ರಚಾರ ಬಿರುಸುಗೊಂಡಿದೆ. ಸಿಎಂ ಸಿದ್ದರಾಮಯ್ಯ ಅಹಿಂದ ಮತಗಳನ್ನು ಕ್ರೋಢೀಕರಿಸಲು, ಸಚಿವ ಜಮೀರ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಕೂಡ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದೆ. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿದೆ. ಬೆಂಗಳೂರು, ಏಪ್ರಿಲ್​ 04: ಉಭಯ ಕ್ಷೇತ್ರಗಳಲ್ಲಿ ಉಭಯ ಪಕ್ಷದಿಂದ ಮತ ಶಿಕಾರಿ ನಡೆಯುತ್ತಿದೆ. ಮತದಾನಕ್ಕೆ ಇನ್ನೂ ಐದು ದಿನ ಬಾಕಿ ಇದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಾಗಿದೆ.

 ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಎರಡನೇ ಸುತ್ತಿನ ಪ್ರಚಾರ ಮಾಡಿದ್ದು, ಅಭ್ಯರ್ಥಿ ಉಮೇಶ್ ಮೇಟಿ ಪರ ಅಬ್ಬರದ ಕ್ಯಾಂಪೇನ್ ಮಾಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೂ ಕಣ್ಣಿಡಲಾಗಿದೆ. ಈ ಮಧ್ಯೆ ಸಚಿವ ಜಮೀರ್​​ಗೆ ಸಿದ್ದರಾಮಯ್ಯರಿಂದ ತುರ್ತು ಬುಲಾವ್ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಅಹಿಂದ ಮತಗಳ ಕ್ರೋಢೀಕರಣಕ್ಕಾಗಿ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಸಭೆ ಮಾಡಿದ್ದಾರೆ. ಎಂ.ಸಿ.ವೇಣುಗೋಪಾಲ್​, ಡಾ.ಪರಮೇಶ್ವರ್ ಮತ್ತು ಮಹದೇವಪ್ಪ ಜೊತೆ ಸಭೆ ಮಾಡಿದ್ದು, ಈ ವೇಳೆ ಉಪಚುನಾವಣೆ ಪ್ರಚಾರಕ್ಕೆ ಬರುವಂತೆ ಜಮೀರ್​ಗೆ ಕರೆ ಮಾಡುವಂತೆ ಕೆ.ಸಿ.ವೇಣುಗೋಪಾಲ್​ಗೆ ಸೂಚಿಸಿದ್ದಾರೆ.

Source : TV9 Kannada

4 hours ago

Home Flash News