... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಅಲ್ಲು ಅರ್ಜುನ್ ‘ರಾಕಾ’ ಪೋಸ್ಟರ್‌ಗೆ ಬಾಲಿವುಡ್ ನಟ ಶಾರುಖ್ ಖಾನ್ ಫಿದಾ

ಅಲ್ಲು ಅರ್ಜುನ್ ‘ರಾಕಾ’ ಪೋಸ್ಟರ್‌ಗೆ ಬಾಲಿವುಡ್ ನಟ ಶಾರುಖ್ ಖಾನ್ ಫಿದಾ

ನಟ ಅಲ್ಲು ಅರ್ಜುನ್ ಅವರು ತಮ್ಮ 44ನೇ ಹುಟ್ಟುಹಬ್ಬವನ್ನು ನಿನ್ನೆ (ಏಪ್ರಿಲ್ 8) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಮುಂದಿನ ಸಿನಿಮಾದ ಹೆಸರು ಹಾಗೂ ಚಿತ್ರದ ಮೊದಲ ಪೋಸ್ಟರ್ ಅನ್ನು ಕೂಡ ಬಿಡುಗಡೆಗೊಳಿಸಲಾಗಿದೆ. ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾಗೆ ‘ರಾಕಾ’ ಎಂದು ಹೆಸರಿಡಲಾಗಿತ್ತು. ಅಲ್ಲು ಅರ್ಜನ್ ಅವರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್‌ಗೆ ಅಭಿಮಾನಿಗಳು ಮಾತ್ರವಲ್ಲದೇ, ಚಿತ್ರರಂಗದ ಪ್ರಮುಖರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಪೋಸ್ಟರ್‌ಗೆ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ ಪ್ರತಿಕ್ರಿಯಿಸಿದ್ದಾರೆ.  ಶಾರುಖ್ ಖಾನ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಲ್ಲು ಅರ್ಜುನ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದರ ಜತೆಗೆ ಸಿನಿಮಾದ ಪೋಸ್ಟರ್‌ ಕುರಿತು ಪ್ರತಿಕ್ರಿಯಿಸಿದ್ದಾರೆ. ‘ಈ ಸಿನಿಮಾದ ಪೋಸ್ಟರ್ ನಿಮ್ಮಂತೆಯೇ ಕುತೂಹಲಕಾರಿ ಮತ್ತು ಅದ್ಭುತವಾಗಿದೆ. 

ಈ ಅನುಭವನ್ನು ಅಟ್ಲೀಯವರ ಮಾತಿನಲ್ಲಿ ಹೇಳುವುದಾದರೆ, ಮಾಸ್ ಮಾಸ್, ಮಾಸ್’. ರಾಕಾದ ಪೋಸ್ಟರ್‌ ತುಂಬಾ ರೋಮಾಂಚನಕಾರಿಯಾಗಿ ಕಾಣುತ್ತಿದೆ. ಆಲ್ ದಿ ಬೆಸ್ಟ್’ ಎಂದು ಬರೆದುಕೊಂಡಿದ್ದಾರೆ. ಅಲ್ಲು ಅರ್ಜುನ್‌ ಅವರು ಪ್ರತಿಕ್ರಿಯಿಸಿದ್ದು, ‘ಶಾರುಖ್ ಗಾರು ನಿಮ್ಮ ಶುಭಾಶಯಕ್ಕೆ ಧನ್ಯವಾದಗಳು. ಸಿನಿಮಾ ಖಂಡಿತವಾಗಿಯೂ ತುಂಬಾ ವಿಶೇಷವಾಗಿದೆ. ಸಿನಿಮಾ ಮೂಲಕ ನಿಮ್ಮ ಹೃದಯವನ್ನು ಗೆಲ್ಲಬೇಕೆಂದು ನಾವು ಆಶಿಸುತ್ತೇವೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು’ ಎಂದು ಬರೆದಿದ್ದಾರೆ. ರಾಕಾ ಸಿನಿಮಾದ ಪಸ್ಟ್‌ ಲುಕ್‌ನಲ್ಲಿ ಅಲ್ಲು ಅರ್ಜುನ್‌ ಅವರು ವಿಭಿನ್ನವಾಗಿ ರಕ್ಷಸನಂತೆ ಕಾಣಿಸಿಕೊಂಡಿದ್ದಾರೆ. ಉಗ್ರ ವ್ಯಕ್ತಿತ್ವವನ್ನು ಪ್ರತಿನಿಧಿಸುವಂತೆ ಕಾಣುತ್ತದೆ. 9 ಭಾಷೆಗಳಲ್ಲಿ ಸಿನಿಮಾದ ಪೋಸ್ಟ್‌ ಬಿಡುಗಡೆಗೊಳಿಸಲಾಗಿದೆ. ಸಿನಿಮಾದಲ್ಲಿ ನಟ ಅಲ್ಲು ಅರ್ಜುನ್‌ ಅವರು 4 ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ದೀಪಿಕಾ ಪಡುಕೋಣೆ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Source : Prajavani

1 hour ago

Home Flash News