Select Location
All Locations
State
Region
City / District
ಬಂಗಾಳದಲ್ಲಿ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ:

ಬಂಗಾಳದಲ್ಲಿ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ ಭರವಸೆ

ಕೋಲ್ಕತ್ತ: 'ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಆರು ತಿಂಗಳೊಳಗೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ಅವರು ಬಿಡುಗಡೆ ಮಾಡಿದ್ದಾರೆ. 'ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. 'ಏಕರೂಪ ನಾಗರಿಕ ಸಂಹಿತೆಯ ಶಿಫಾರಸು ಬಿಜೆಪಿಯದ್ದಲ್ಲ. ಇದು ಸಂವಿಧಾನಿಕವಾಗಿದ್ದು' ಎಂದು ಅಮಿತ್ ಶಾ ವಿವರಿಸಿದ್ದಾರೆ.


Prajavani 20 days ago
Home Flash News