Select Location
All Locations
State
Region
City / District
IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ

IPL 2026 RCB vs LSG: ಐಪಿಎಲ್​ನ 19ನೇ ಆವೃತ್ತಿಯಲ್ಲಿ ಈವರೆಗೆ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು (ಏ.15) ಮುಖಾಮುಖಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಲಿದ್ದಾರೆ. IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ…

ಈ ಮೂವರ ಅಲಭ್ಯತೆಯ ನಡುವೆಯೂ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದ ಬಳಗವನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೂಡ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಆಡಲಿದ್ದಾರೆ. ಇನ್ನು ಐದನೇ ಕ್ರಮಾಂಕವು ಟಿಮ್ ಡೇವಿಡ್​ಗೆ ಫಿಕ್ಸ್​.


TV9 Kannada 6 days ago
Home Flash News