ದೆಹಲಿ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ.. ಕೇಜ್ರಿವಾಲ್ಗೆ ಶಾಕ್, 7 ಸಂಸದರ ಜೊತೆಗೆ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ..!
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದಲ್ಲಿ (AAP) ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದೆ. ಪಕ್ಷದ ಪ್ರಮುಖ ನಾಯಕರಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಮೂವರೂ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ. ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದಲ್ಲಿ (AAP) ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದೆ. ಪಕ್ಷದ ಪ್ರಮುಖ ನಾಯಕರಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಮೂವರೂ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ.
ಬಿಜೆಪಿ ಸೇರ್ಪಡೆ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಾಘವ್ ಚಡ್ಡಾ, ತಮ್ಮ ಹಳೆಯ ಪಕ್ಷದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‘ಆಮ್ ಆದ್ಮಿ ಪಕ್ಷವು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ, ಬದಲಾಗಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ಭ್ರಷ್ಟಾಚಾರವನ್ನು ತೊಡೆದುಹಾಕುವ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದ ಪಕ್ಷವು ಈಗ ತಪ್ಪು ದಾರಿಯಲ್ಲಿ ನಡೆಯುತ್ತಿರುವ ಜನರ ಕೈಯಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಮೂರನೇ ಎರಡರಷ್ಟು (2/3) ಸಂಸದರು ಬಿಜೆಪಿ ಸೇರುತ್ತಿದ್ದಾರೆ ಎಂದು ರಾಘವ್ ಚಡ್ಡಾ ಪ್ರತಿಪಾದಿಸಿದ್ದಾರೆ. ಈ ಬೆಳವಣಿಗೆಯು ಎಎಪಿ ಪಾಳೆಯದಲ್ಲಿ ತಲ್ಲಣ ಮೂಡಿಸಿದೆ. ನಾನು ಈ ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬನಾಗಿದ್ದೆ. ನನ್ನ ರಕ್ತ ಮತ್ತು ಬೆವರಿನಿಂದ ಈ ಪಕ್ಷವನ್ನು ಕಟ್ಟಿದ್ದೆ. ಈ ಪಕ್ಷದ ಬಗ್ಗೆ ನನಗಿಂತ ಚೆನ್ನಾಗಿ ಯಾರೂ ತಿಳಿದಿರಲಿಕ್ಕಿಲ್ಲ. ಆದರೆ ಈಗ ಆಮ್ ಆದ್ಮಿ ಪಕ್ಷವು ಹಳೆಯ ತತ್ವಗಳ ಮೇಲೆ ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 10 ಆಮ್ ಆದ್ಮೀ ಸಂಸದರಲ್ಲಿ 7 ಮಂದಿ ಬಿಜೆಪಿ ಸೇರಲಿದ್ದಾರೆ.
ಕಳೆದ ಒಂದು ವರ್ಷದಿಂದ ತಾವು ಪಕ್ಷದ ಚಟುವಟಿಕೆಗಳಿಂದ ದೂರವಿರಲು ಕಾರಣವನ್ನೂ ಚಡ್ಡಾ ಸ್ಪಷ್ಟಪಡಿಸಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಪಕ್ಷದಿಂದ ದೂರವಿದ್ದೆ, ಏಕೆಂದರೆ ನಾನು ಅವರ ತಪ್ಪು ಕೆಲಸಗಳಿಗೆ ಮತ್ತು ಅಕ್ರಮಗಳಿಗೆ ಸಾಥ್ ನೀಡಲು ಬಯಸಿರಲಿಲ್ಲ. ಅವರ ತಪ್ಪು ನಿರ್ಧಾರಗಳ ಜೊತೆಗೆ ನಾನಿರಲಿಲ್ಲ ಎಂದು ಅವರು ಗುಡುಗಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಈ ಬೆಳವಣಿಗೆಯು ದೊಡ್ಡ ಸಂಚಲನ ಮೂಡಿಸಿದ್ದು, ಆಮ್ ಆದ್ಮಿ ಪಕ್ಷಕ್ಕೆ ಇದು ಚೇತರಿಸಿಕೊಳ್ಳಲಾಗದ ಹೊಡೆತ ಎಂದು ವಿಶ್ಲೇಷಿಸಲಾಗುತ್ತಿದೆ.