Select Location
All Locations
State
Region
City / District
Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

India Women's T20 World Cup 2026 Squad: 2026ರ ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ, ಸ್ಮೃತಿ ಮಂಧನಾ ಉಪನಾಯಕಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷದ ಏಕದಿನ ವಿಶ್ವಕಪ್ ಗೆಲುವಿನ ನಂತರ, ಭಾರತ ವನಿತೆಯರು ತಮ್ಮ ಎರಡನೇ ಐಸಿಸಿ ಟ್ರೋಫಿ ಗೆಲ್ಲುವ ಗುರಿ ಹೊಂದಿದ್ದಾರೆ. ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗುವ ಈ ಮಹತ್ವದ ಟೂರ್ನಿಯಲ್ಲಿ ಭಾರತ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. 

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ (India Women’s Cricket Team) ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ (Women’s T20 World Cup 2026) 15 ಸದಸ್ಯರ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. 

ಎಂದಿನಂತೆ ಹರ್ಮನ್​ಪ್ರೀತ್ ಕೌರ್ (Harmanpreet Kaur) ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ ಜವಾಬ್ದಾರಿ ಸಿಕ್ಕಿದೆ. ಉಳಿದಂತೆ ಈ ತಂಡದಲ್ಲಿ ಈ ಮೊದಲೇ ನಿರೀಕ್ಷಿಸಿದ್ದ ಹೆಸರುಗಳೇ ಸೇರಿವೆ. 2026 ರ ಮಹಿಳಾ ಟಿ20 ವಿಶ್ವಕಪ್​ಗೆ ಇಂಗ್ಲೆಂಡ್ ಆತಿಥ್ಯವಹಿಸುತ್ತಿದ್ದು, ಈ ಪಂದ್ಯಾವಳಿ ಜೂನ್ 12 ರಂದು ಪ್ರಾರಂಭವಾಗಲಿದ್ದು, ಜುಲೈ 5 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಮಹಿಳಾ ವಿಶ್ವಕಪ್‌ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿದ್ದು, ತಲಾ 6 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ.


TV9 Kannada 3 hours ago
Home Flash News