ಕೊನೆಗೂ ಬೆಂಬಲ ನೀಡಿದ ವಿಸಿಕೆ: ವಿಜಯ್ ‘ಸಿಎಂ’ ಹಾದಿ ಸುಗಮ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ವಿಸಿಕೆ ಬೇಷರತ್ ಬೆಂಬಲ ನೀಡಲಿದೆ ಎಂದು ಆ ಪಕ್ಷದ ಉನ್ನತ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ದಿ ಹಿಂದೂ’ ವರದಿ ಮಾಡಿದೆ. ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ವಿಸಿಕೆ ಬೇಷರತ್ ಬೆಂಬಲ ನೀಡಲಿದೆ ಎಂದು ಆ ಪಕ್ಷದ ಉನ್ನತ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ದಿ ಹಿಂದೂ’ ವರದಿ ಮಾಡಿದೆ. 5 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್ ಈಗಾಗಲೇ ಬೆಂಬಲ ಘೋಷಿಸಿದ್ದು, ಸಿಪಿಐ ಮತ್ತು ಸಿಪಿಐ(ಎಂ) ಕೂಡ ಬೆಂಬಲ ನೀಡುವುದಾಗಿ ಹೇಳಿವೆ. ಇದೀಗ ವಿಸಿಕೆಯು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.