10 ಫೋರ್, 2 ಸಿಕ್ಸ್: ವಿಶ್ವ ದಾಖಲೆಯೇ ಉಡೀಸ್!
Fatima Sana Records: ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಸ್ಫೋಟಕ ಬ್ಯಾಟಿಂಗ್ ಅಬ್ಬರವೊಂದಕ್ಕೆ ಕರಾಚಿಯ ನ್ಯಾಷನಲ್ ಸ್ಟೇಡಿಯಂ ಸಾಕ್ಷಿಯಾಗಿದೆ. ಝಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡದ ನಾಯಕಿ ಫಾತಿಮಾ ಸನಾ ಶರವೇಗದ ಅರ್ಧಶತಕ ಸಿಡಿಸಿ ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಪಾಕಿಸ್ತಾನ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಫಾತಿಮಾ ಸನಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಫಾತಿಮಾ ಸನಾ, ಕೇವಲ 15 ಎಸೆತಗಳಲ್ಲಿ 50 ರನ್ ಪೂರೈಸಿದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ವಿಶ್ವ ದಾಖಲೆ ಉಡೀಸ್: ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೋಫಿ ಡಿವೈನ್ (ನ್ಯೂಝಿಲೆಂಡ್), ಫೀಬಿ ಲಿಚ್‌ಫೀಲ್ಡ್ (ಆಸ್ಟ್ರೇಲಿಯಾ) ಮತ್ತು ರಿಚಾ ಘೋಷ್ (ಭಾರತ) 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದರು. ಇದೀಗ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿ ಫಾತಿಮಾ ಸನಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.