Siddaramaiah: 2 ವರ್ಷಕ್ಕಷ್ಟೇ ಅಲ್ಲ.. ಪಂಚ ಗ್ಯಾರಂಟಿ ಯೋಜನೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು (ಜೂ.15): ಪಂಚ ಗ್ಯಾರಂಟಿ ಯೋಜನೆಗಳು (Guarantee Scheme) ಸರ್ಕಾರಕ್ಕೆ ಹೊರೆಯಾಗಿದ್ದು, ಇದೀಗ ಯೋಜನೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ ಎನ್ನುವ ಆರೋಪವನ್ನ ವಿಪಕ್ಷಗಳು ಮಾಡ್ತಿವೆ. ಇದಕ್ಕೆ ಎಕ್ಸ್ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಗ್ಯಾರಂಟಿ ಯೋಜನೆ ಕುರಿತು ಮಹತ್ವದ ಅಪ್ಡೇಟ್ (Update) ನೀಡಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.