Select Location
All Locations
State
Region
City / District
ಪಶ್ಚಿಮ ಏಷ್ಯಾ ಸಂಘರ್ಷ | ಈವರೆಗೆ 16 ಭಾರತೀಯರ ಸಾವು: ಸಂಸತ್ತಿಗೆ ಕೇಂದ್ರ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ | ಈವರೆಗೆ 16 ಭಾರತೀಯರ ಸಾವು: ಸಂಸತ್ತಿಗೆ ಕೇಂದ್ರ ಮಾಹಿತಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದಾಗಿನಿಂದ ಈವರೆಗೆ 10 ಮಂದಿ ನಾವಿಕರು ಸೇರಿದಂತೆ ಒಟ್ಟು 16 ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಸಿಪಿಐ(ಎಂ) ಸಂಸದ ಜಾನ್‌ ಬ್ರಿಟ್ಟಾಸ್‌ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಈ ಮಾಹಿತಿ ನೀಡಿದ್ದಾರೆ.

2026ರ ಫೆಬ್ರುವರಿಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ, 10 ನಾವಿಕರು ಸೇರಿದಂತೆ 16 ಭಾರತೀಯ ನಾಗರಿಕರು ಸಾವಿಗೀಡಾಗಿದ್ದಾರೆ. ಆ ಪೈಕಿ ಒಮಾನ್‌ನಲ್ಲಿ 8, ಯುಎಇಯಲ್ಲಿ ನಾಲ್ವರು, ಕುವೈತ್‌ನಲ್ಲಿ ಇಬ್ಬರು, ಸೌದಿ ಅರೇಬಿಯಾ ಮತ್ತು ಇರಾಕ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ದಾಳಿಯಲ್ಲಿ ಒಟ್ಟು 75 ಭಾರತೀಯರು ಗಾಯಗೊಂಡಿದ್ದು, ಅವರಲ್ಲಿ ಯುಎಇಯಲ್ಲಿ 32, ಒಮಾನ್‌ನಲ್ಲಿ 24, ಕತಾರ್‌ನಲ್ಲಿ ನಾಲ್ವರು, ಕುವೈತ್‌ನಲ್ಲಿ 13, ಸೌದಿ ಅರೇಬಿಯಾ ಮತ್ತು ಇಸ್ರೇಲ್‌ನಲ್ಲಿ ತಲಾ ಒಬ್ಬರು ಸೇರಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಇನ್ನು ಪ್ರತ್ಯೇಕ ಅವಘಡದಲ್ಲಿ (ಕತಾರ್‌ನ ರಾಸ್ ಲಫಾನ್ ಅನಿಲ ಘಟಕದಲ್ಲಿ ದುರಂತ) 12 ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಎಂದೂ ಸಚಿವರು ತಿಳಿಸಿದ್ದಾರೆ.


Udayavani 24 days ago
Home Flash News