Select Location
All Locations
State
Region
City / District
Siddaramaiah: ವಯಸ್ಸಾಯ್ತು, ಎಷ್ಟು ವರ್ಷ ಬದುಕಿರ್ತೀನೋ...; ಚುನಾವಣಾ ಅಕ್ರಮದ ಬಗ್ಗೆ ಸಿದ್ದರಾಮಯ್ಯ ಬೇಸರ

Siddaramaiah: ವಯಸ್ಸಾಯ್ತು, ಎಷ್ಟು ವರ್ಷ ಬದುಕಿರ್ತೀನೋ...; ಚುನಾವಣಾ ಅಕ್ರಮದ ಬಗ್ಗೆ ಸಿದ್ದರಾಮಯ್ಯ ಬೇಸರ

ತುಮಕೂರು (ಆ.31): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಚುನಾವಣೆ ರಾಜಕೀಯದ ಬಗ್ಗೆ ಮಾತಾಡಿದ್ದಾರೆ. ತುಮಕೂರಿನ (Tumakuru) ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ, 'ನನಗೆ ಈಗ 80 ವರ್ಷ, ಆರೋಗ್ಯವಾಗಿದ್ದೇನೆ. ಎಷ್ಟು ವರ್ಷ ಬದುಕಿರುತ್ತೇನೆ ಅಂತ ಗೊತ್ತಿಲ್ಲ. ಆದ್ರೆ, ನಾನು ಮುಂದಿನ ಚುನಾವಣೆಗೆ (Election) ನಿಲ್ಲಬಾರದು ಎಂಬ ನಿರ್ಧಾರ ಮಾಡಿದ್ದೇನೆ. ಕಾರಣ ವಯಸ್ಸಾಯಿತು ಅಂತಲ್ಲ. ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಬಹಳ ದುಬಾರಿಯಾಗಿದೆ ಎಂಬ ಕಾರಣಕ್ಕಾಗಿ ಚುನಾವಣೆಗೆ ಸ್ಪರ್ಧಿಸೋದು ಬೇಡ ಎಂದು ನಿರ್ಧರಿಸಿದ್ದೇನೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ಚುನಾವಣೆ ವ್ಯವಸ್ಥೆ ಹದಗೆಟ್ಟಿದೆ' ತುಮಕೂರಿನಲ್ಲಿ ಆಯೋಜಿಸಿದ್ದ ವೀರಣ್ಣನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಅವ್ರು ಇಂದಿನ ಚುನಾವಣೆ ವ್ಯವಸ್ಥೆ ಬಹಳ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಅಭಿಪ್ರಾಯ ನನ್ನದು ಎಂದಿದ್ದಾರೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ವಯಸ್ಸಾಯ್ತು, ಎಷ್ಟು ವರ್ಷ ಬದುಕ್ತೀನಿ ಗೊತ್ತಿಲ್ಲ ಎಂದ ಸಿದ್ದರಾಮಯ್ಯ ಅವ್ರು ಚುನಾವಣೆಯಲ್ಲಿ ಭಾಗವಹಿಸದಿದ್ರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮ ವಂಚನೆಯಾಗುತ್ತದೆ ಎಂದಿದ್ದಾರೆ.

ನನಗೆ ಲೋಕಸಭಾ ಚುನಾವಣೆಗೆ ನಿಲ್ಲಲು ಆಫರ್‌ ಬಂದಿತ್ತು, ತಿರಸ್ಕರಿಸಿದೆ. ಈ ಹಿಂದೆ 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ನಿಂತಿದ್ದೆ. 10 ಸಾವಿರ ಮತಗಳಿಂದ ಸೋತಿದ್ದೆ. ಆಗ ರಾಮಕೃಷ್ಣ ಹೆಗಡೆಯವರು ಕೂಡ ಸೋತರು. ಆವತ್ತೆ ನಾನು ಲೋಕಸಭೆಗೆ ಮತ್ತೆ ನಿಲ್ಲಬಾರದು ಎಂದು ತೀರ್ಮಾನ ಮಾಡಿಬಿಟ್ಟೆ. ಲೋಕಸಭೆಗೂ ನಿಲ್ಲೊಲ್ಲ, ವಿಧಾನಸಭೆಗೂ ನಿಲ್ಲೊಲ್ಲ ಎಂದು ಕನ್ನಡ ಪ್ರಭ ವರದಿ ಮಾಡಿದೆ.


News18 Kannada 1 hour ago
Home Flash News