ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳು ಡಿಜಿಟಲ್ ಗ್ರಂಥಾಲಯಗಳನ್ನು ಹೊಂದಿದ್ದು, ಆಗಾಗ್ಗೆ ಕಾಡುವ ನೆಟ್‌ವರ್ಕ್ ಸಮಸ್ಯೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಸದರಿ ತಾಲೂಕು ಮಲೆನಾಡು ಪ್ರದೇಶವಾಗಿರುವ ಕಾರಣ ಅತಿಯಾದ ಮಳೆಯಿಂದ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಕೂಡಲೇ ಕ್ರಮಕೈಗೊಳ್ಳಲಾಗಿದ್ದು, ನೆಟ್‌ವರ್ಕ್ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಲಾಗಿರುತ್ತದೆ. ಮುಂದುವರೆದು ಬೇಗಾರು ಮತ್ತು ಮರ್ಕಲ್ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಪಾಲಕರು ಇಲ್ಲವಾಗಿದ್ದು, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಉಳಿದಂತೆ ಮೆಣಸೆ ಗ್ರಾಮ ಪಂಚಾಯಿತಿಯಲ್ಲಿನ ಕೊಠಡಿಗಳು ಹಳೆಯದಾದ ಕಾರಣ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಗ್ರಂಥಾಲಯದಲ್ಲಿ ಓದುಗರಿಗೆ ಅನುಕೂಲವಾಗುವಂತೆ ನೀರಿನ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಅದರಂತೆ ಮುಂದಿನ ದಿನಗಳಲ್ಲಿ ತಾಲೂಕು ಪಂಚಾಯಿತಿ ಅನಿರ್ಬಂಧಿತ ಅನುದಾನದಲ್ಲಿ ಶೌಚಾಲಯವನ್ನು ನಿರ್ಮಾಣ ಮಾಡುವಂತೆ ಕ್ರಮವಹಿಸಲಾಗುವುದು ಎಂದು ಶೃಂಗೇರಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
Source : Smacy News
16 days ago