ವೆಸ್ಟ್ ಇಂಡೀಸ್ ವಿರುದ್ಧ ಸರಣಿ: ಹಾರ್ದಿಕ್-ಪಂತ್‌ಗೆ ಕೊಕ್, ನಮನ್-ನಬಿಗೆ ಅವಕಾಶ
ನವದೆಹಲಿ: ಪಂಜಾಬ್‌ನ ನೀಳಕಾಯದ ಆಲ್‌ರೌಂಡರ್ ನಮನ್ ಧೀರ್ ಮತ್ತು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಅಕಿಬ್ ನಬಿ ಅವರು ಭಾರತ ಏಕದಿನ ತಂಡದಲ್ಲಿ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಬುಧವಾರ ತಂಡಗಳನ್ನು ಪ್ರಕಟಿಸಲಾಗಿದ್ದು, ಅನುಭವಿಗಳಾದ ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.
ಭಾರತ ತಂಡವು, ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ಇದೇ 27ರಂದು ತಿರುವನಂತಪುರದಲ್ಲಿ ನಡೆಯಲಿದೆ.
ಏಷ್ಯನ್ ಕ್ರೀಡೆಗಳಿಗೆ ಆಯ್ಕೆಯಾಗಿರುವ ತಂಡವನ್ನೇ ಟಿ20 ಸರಣಿಗೆ ಬಹುತೇಕ ಉಳಿಸಿಕೊಳ್ಳಲಾಗಿದೆ. ಮಯಂಕ್ ಯಾದವ್ ಮತ್ತು ಪ್ರಿನ್ಸ್ ಯಾದವ್ ಅವರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಇವರಿಗಾಗಿ ಯಶ್ ಠಾಕೂರ್ ಮತ್ತು ವಿಪ್ರಜ್ ನಿಗಮ್ ಅವರು ಏಷ್ಯನ್ ಗೇಮ್ಸ್ ಬಳಿಕ ಸ್ಥಾನ ತೆರವುಗೊಳಿಸಬೇಕಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ಸರಣಿಗೆ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಡಿಸುವ ಉದ್ದೇಶದಿಂದ ಏಷ್ಯನ್ ಗೇಮ್ಸ್ ತಂಡಕ್ಕೆ ಅವರನ್ನು ಪರಿಗಣಿಸಿರಲಿಲ್ಲ. ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜ ಅವರನ್ನು ಏಕದಿನ ತಂಡಕ್ಕೆ ಮರಳಿದ್ದಾರೆ.