South India's No.1 Digital Mobile Paper
LIVE
Welcome to Smacy Media

Ration Card: APL-BPL ಕಾರ್ಡ್​​​ ಇ-ಕೆವೈಸಿ ಡೆಡ್​ಲೈನ್ ವಿಸ್ತರಣೆ; ಸರ್ಕಾರದಿಂದ ಮಹತ್ವದ ಆದೇಶ

Ration Card: APL-BPL ಕಾರ್ಡ್​​​ ಇ-ಕೆವೈಸಿ ಡೆಡ್​ಲೈನ್ ವಿಸ್ತರಣೆ; ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು (ಸೆ.17): ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ (Ration Card Holders) ಬಿಗ್ ಗುಡ್​ ನ್ಯೂಸ್​ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ (E-KYC) ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ ಅವಧಿ ವಿಸ್ತರಿಸಿದ ಸರ್ಕಾರ, ನ್ಯಾಯಬೆಲೆ ಅಂಗಡಿಗಳ ಸಮಯದಲ್ಲೂ ಬದಲಾವಣೆ ಮಾಡಿದೆ.
ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ
ರಾಜ್ಯದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಿ ಡೆಡ್​​ಲೈನ್​ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 30ರೊಳಗೆ ಪಡಿತರ ಚೀಟಿ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಇದೀಗ ಸದ್ಯ ಗಡುವು ವಿಸ್ತರಣೆ ಮಾಡಿ ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಲಾಗಿದೆ.
ಜನಸಾಮಾನ್ಯರು ಕಂಗಾಲಾಗಬೇಕಿಲ್ಲ
ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರೋ ಸರ್ವರ್ ಸಮಸ್ಯೆಗೆ ಜನಸಾಮಾನ್ಯರು ಕಂಗಾಲಾಗಬೇಕಿಲ್ಲ, ಇ-ಕೆವೈಸಿ ಗಡುವನ್ನ ಅಕ್ಟೋಬರ್ 20 ರವರೆಗೆ ವಿಸ್ತರಣೆ ಮಾಡಿರೋದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

📍 Karnataka
📰 Prajavani
🕒 5 days ago

Related News

ಕೆಪಿಎಸ್‌ಸಿಗೆ ಬೀಗ ಜಡಿಯಲು ಚಿಂತನೆ: ಸಿಎಂ
ಕೆಪಿಎಸ್‌ಸಿಗೆ ಬೀಗ ಜಡಿಯಲು ಚಿಂತನೆ: ಸಿಎಂ
ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ: ಅನಂತ್ ನಾಗ್
ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ: ಅನಂತ್ ನಾಗ್
Today's Motivation
Today's Motivation
Back
Post Ad
To Ads