South India's No.1 Digital Mobile Paper
LIVE
Welcome to Smacy Media

ʼಸರ್ವಾಧಿಕಾರಿʼ ಕಾಂಗ್ರೆಸ್‌ನ ಭಾರತ ಶೃಂಗಸಭೆ ದೇಶ ವಿರೋಧಿ ಸಮಾವೇಶ: ಕೇಂದ್ರ ಸಚಿವ

ʼಸರ್ವಾಧಿಕಾರಿʼ ಕಾಂಗ್ರೆಸ್‌ನ ಭಾರತ ಶೃಂಗಸಭೆ ದೇಶ ವಿರೋಧಿ ಸಮಾವೇಶ: ಕೇಂದ್ರ ಸಚಿವ

ಹೈದರಾಬಾದ್: ಕಾಂಗ್ರೆಸ್‌ ಪಕ್ಷವು ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಎರಡು ದಿನಗಳ ʼಭಾರತ ಶೃಂಗಸಭೆʼ ಕುರಿತು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿಯನ್ನು ಅಂತರರಾಷ್ಟ್ರೀಯ ನಾಯಕ ಎಂಬಂತೆ ಬಿಂಬಿಸುವ ಹತಾಶ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ಸೇ ನಿಜವಾದ ಫ್ಯಾಸಿಸ್ಟ್ ಪಕ್ಷ ಎಂದು ಆರೋಪಿಸಿದ ಅವರು, ʼಭಾರತ ಶೃಂಗಸಭೆʼಯು ದೇಶ ವಿರೋಧಿ ಕಾರ್ಯಕ್ರಮ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ತೆಲಂಗಾಣ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿಶನ್‌ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಸರ್ವಾಧಿಕಾರಿ ಆಡಳಿತ ಎಂದು ಕರೆದಿರುವ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ದೇಶವು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಮರೆತಿಲ್ಲ. ಆ 18 ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿತ್ತು. ಮೂಲಭೂತ ಹಕ್ಕುಗಳನ್ನು ನಿಗ್ರಹಿಸಿತ್ತು. ಜಯಪ್ರಕಾಶ್ ನಾರಾಯಣ್, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಮತ್ತು ಜಾರ್ಜ್ ಫೆರ್ನಾಂಡಿಸ್ ಸೇರಿದಂತೆ ಲಕ್ಷಾಂತರ ಜನರನ್ನು ಜೈಲಿಗೆ ಹಾಕಿತ್ತು ಎಂದು ಆರೋಪಿಸಿದ್ದಾರೆ.

📍 Chennai
📰 Prajavani
🕒 7 days ago

Related News

ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭಕ್ಕೆ‌ ತಮಿಳುನಾಡು ಮುಖ್ಯಮಂತ್ರಿ ವಿಜಯ್
ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭಕ್ಕೆ‌ ತಮಿಳುನಾಡು ಮುಖ್ಯಮಂತ್ರಿ ವಿಜಯ್
ಭಾರತದ ಮುಡಿಗೆ ಏಕದಿನ ಸರಣಿ ಕಿರೀಟ: ಅರ್ಷದೀಪ್, ಸಿರಾಜ್ ‘ಬಿರುಗಾಳಿ’
ಭಾರತದ ಮುಡಿಗೆ ಏಕದಿನ ಸರಣಿ ಕಿರೀಟ: ಅರ್ಷದೀಪ್, ಸಿರಾಜ್ ‘ಬಿರುಗಾಳಿ’
ಮೇಕೆದಾಟು ವಿಚಾರದಲ್ಲಿ ಡಿಕೆಶಿ vs ತಮಿಳುನಾಡು ಕಾಂಗ್ರೆಸ್: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹ
ಮೇಕೆದಾಟು ವಿಚಾರದಲ್ಲಿ ಡಿಕೆಶಿ vs ತಮಿಳುನಾಡು ಕಾಂಗ್ರೆಸ್: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹ
⬅ Back
➕ Post Ad
To Ads ➡